ಬಡವರ ಒಳಿತಿಗಾಗಿ ಹಣವೆಲ್ಲಾ ಖರ್ಚು ಮಾಡಿ

ಬಡವರ ಒಳಿತಿಗಾಗಿ ಹಣವೆಲ್ಲಾ ಖರ್ಚು ಮಾಡಿ

ದೇವನಹಳ್ಳಿ: ಪರಿಶಿಷ್ಟ ಜಾತಿ ಉಪ ಯೋಜನೆ, ಗಿರಿಜನ ಉಪ ಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಬಿಡುಗಡೆಯಾಗಿರುವ ಹಣವನ್ನು ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಶುಕ್ರವಾರ ಕೋರಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಜನೆಗಳಿಗೆ ಸಂಬಂಧಿಸಿದ ಟೆಂಡರ್ ಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಕೃಷ್ಣಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಸುಮ, ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ವೆಂಕಟೇಶ್ ರೆಡ್ಡಿ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಪಶುಪಾಲನಾ, ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related