ಕಮಲ ಕಲಿಗಳಲ್ಲಿ ತಳಮಳ ಹೆಚ್ಚಿಸಿದ ಶ್ರೀನಿವಾಸ್ ಪ್ರಸಾದ್ ಹೇಳಿಕೆ

ಕಮಲ ಕಲಿಗಳಲ್ಲಿ ತಳಮಳ ಹೆಚ್ಚಿಸಿದ ಶ್ರೀನಿವಾಸ್ ಪ್ರಸಾದ್ ಹೇಳಿಕೆ

ಮೈಸೂರು: ಆರು-ಏಳು ವರ್ಷಗಳಿಂದ ಇದ್ದಿದ್ದ ವೈಮನಸನ್ನು ಮರೆತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಬಿಜೆಪಿಯ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಇದರಿಂದ ರಾಜ್ಯ ಬಿಜೆಪಿಯಲ್ಲಿ ಆತಂಕ ಮನೆ ಮಾಡಿದೆ.

ಸುಮಾರು ಆರು ಏಳು ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿ. ಶ್ರೀನಿವಾಸ್ ಪ್ರಸಾದ್ ಅವರ ಇಬ್ಬರ ನಡುವೆ ರಾಜಕೀಯವಾಗಿ ವೈಮನಸನಸ್ಸಿಗೆ ಇಂದು ತೆರೆ ಬಿದ್ದಂತಾಗಿದೆ. ಈ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ, ಮುನಿಸು ಮರೆತು ಪ್ರಸಾದ್ ಅವರನ್ನು ಭೇಟಿಯಾಗಿರುವುದು ಚರ್ಚೆಗೆ ಕಾರಣವಾಗಿದೆ. ಉಭಯ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಈ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌. ಲಕ್ಷ್ಮಣ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್ ಅವರನ್ನು ಬೆಂಬಲಿಸುವಂತೆ ಕೋರಿದರು ಎಂದು ತಿಳಿದುಬಂದಿದೆ.

ಇನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹಾಲಿ ಸಂಸದ ಶ್ರೀ ಶ್ರೀನಿವಾಸ್ ಅವರು, ನಾಳೆ (ಏ.14) ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ, ಬರುವುದೂ‌ ಇಲ್ಲ. ಕರೆದಿಲ್ಲ, ಕರೆಯುವುದೂ ಇಲ್ಲ. ನಾನು ಹೋಗುವುದೂ ಇಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಜೊತೆ ರಾಜಕೀಯದ ಚರ್ಚೆ ನಡೆದಿಲ್ಲ. ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದ್ದೆ. ಅವರು ನನ್ನ ಬೆಂಬಲ ಕೇಳಿದ್ದಾರೆ. ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನಷ್ಟೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ ಎಂದು ಹೇಳಿದರು.

 

Related