ಪೇಲ್ ಆದ ವಿದ್ಯಾರ್ಥಿಗಳಿಗೆ, ಪೂರಕ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ..

  • In State
  • May 19, 2022
  • 200 Views

ಪೇಲ್ ಆದ ವಿದ್ಯಾರ್ಥಿಗಳಿಗೆ ಮೇ27ರಿಂದ ಜೂನ್ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಬಳಿಕ ಪೂರಕ ಪರೀಕ್ಷೆಯ ಪಲಿತಾಂಶ ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.


ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam)  ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಶೇ 85.63ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದಿದ್ದ 8.53 ಲಕ್ಷ ವಿದ್ಯಾರ್ಥಿಗಳ ಪೈಕಿ 7.38 ಲಕ್ಷ ವಿದ್ಯಾರ್ಥಿಗಳು (Student) ಪಾಸಾಗಿದ್ದಾರೆ. ಈ ಪೈಕಿ 145 ವಿದ್ಯಾರ್ಥಿಗಳು ಔಟ್​ ಆಫ್  ಅಂಕಗಳನ್ನು (Out Off Marks) ಪಡೆದಿದ್ದಾರೆ. ಫೇಲ್ ಆದ ವಿದ್ಯಾರ್ಥಿಗಳಿಗೆ ಮೇ 27ರಿಂದ ಜೂನ್ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.  ಬಳಿಕ ಪೂರಕ ಪರೀಕ್ಷೆಯ ಫಲಿತಾಂಶ  ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C Nagesh) ಹೇಳಿದರು.

2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶ ಹಿನ್ನೆಲೆ ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ​ ಫಲಿತಾಂಶದ ವಿವರಗಳನ್ನು ನೀಡಿದರು. ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

8,07,206 ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ರಿಪೀಟರ್ಸ್​ ಸೇರಿದಂತೆ 8,53,436 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 625ಕ್ಕೆ 625 ಅಂಕಗಳನ್ನು ಒಟ್ಟು 145 ಮಕ್ಕಳು ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶದ ವಿವರ ನೀಡಿದರು.

Related