ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ

ಕೊಪ್ಪಳ : ಕೊರೋನಾ ಬಾರದಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ನುಡಿದರು.

ಅಭಿನಂದನೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ.ಪರೀಕ್ಷೆ ಅತ್ಯಂತ ಉತ್ತಮವಾಗಿ ನಡೆಸಿಕೊಟ್ಟ ಶಿಕ್ಷಣ ಇಲಾಖೆ , ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ಗಂಗಾವತಿ ತಾಲೂಕಿನಲ್ಲಿ ಸುಮಾರು 20 ಪರೀಕ್ಷೆ ಕೇಂದ್ರಗಳಿದ್ದು, 10 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೊಪ್ಪಳ ಜಿಲ್ಲೆಯ ಮತ್ತು ಗಂಗಾವತಿ ವಿಧಾನ ಸಭಾ ಕ್ಷೇತ್ರದ ಯಾವುದೇ ಒಬ್ಬ ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ಬರಲಾರದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಿ ನಮ್ಮ ಜಿಲ್ಲೆಗೆ ಒಳ್ಳೆಯ ಹೆಸರು ಬಂದಿದೆ.

Related