ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಕೋಟೆ ನಾಡು ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಕೋಟೆ ನಾಡು ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ.

ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಶೇ.96 ದೊಂದಿಗೆ ಈ ಬಾರಿ ಎಸ್‌ ಎಸ್‌ ಎಲ್‌ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಡ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಹಾಸನ 3ನೇ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರು ಗ್ರಾ. ಜಿಲ್ಲೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆ 18ನೇ ಸ್ಥಾನವನ್ನು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ 19ನೇ ಸ್ಥಾನವನ್ನು ಪಡೆದುಕೊಂಡಿದೆ.

 

Related