ಖಾಸಗಿ ಆಸ್ಪತ್ರೆಗಳಿಗೆ ಬೆದರಿಕೆ ಹಾಕಲ್ಲ

ಖಾಸಗಿ ಆಸ್ಪತ್ರೆಗಳಿಗೆ ಬೆದರಿಕೆ ಹಾಕಲ್ಲ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಶೀಘ್ರವೇ ಶುಲ್ಕ ಪಾವತಿಸಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದಿಂದ ದಾಖಲಾಗುವ ಕೋವಿಡ್ ಸೋಂಕಿತರಿಗೆ ತಗುಲುವ ಶುಲ್ಕವನ್ನು 15 ದಿನಗಳಲ್ಲಿ ಸರ್ಕಾರದಿಂದ ಪಾವತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಶೀಘ್ರದಲ್ಲೇ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಲಕ್ಷ್ಮೀದೇವಿನಗರ ವಿಭಾಗದ ಖಾಸಗಿ ಆಸ್ಪತ್ರೆಗಳು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆಯಲ್ಲಿ ಮಾತನಾಡಿ, ನಾವು ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳಿಗೆ ಬೆದರಿಕೆ ಹಾಕಲ್ಲ. ಯಾವುದೇ ಅಧಿಕಾರಿ ಬೆದರಿಕೆ ಹಾಕಿದಲ್ಲಿ ನನಗೆ ಇಲ್ಲವೇ ಐಎಎಸ್ ಅಧಿಕಾರಿ ವಿಶಾಲ್ ಅವರ ಗಮನಕ್ಕೆ ತಂದರೆ ಬಗೆಹರಿಸುತ್ತೇವೆ ಎಂದು ಸಚಿವರು ತಿಳಿಸಿದರು.

Related