ಜಾನುವಾರಗಳಿಗೂ ʼಆ್ಯಂಬುಲೆನ್ಸ್ ಸೇವೆʼ ಆರಂಭ

ಜಾನುವಾರಗಳಿಗೂ ʼಆ್ಯಂಬುಲೆನ್ಸ್ ಸೇವೆʼ ಆರಂಭ

ಗದಗ : ಪಶು ಸಂಗೋಪನಾ ಹಾಗೂ ವಕ್ಫ್ ಸಚಿವ ಪ್ರಭು ಚವ್ಹಾಣ ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ್ದು, ಪಶುಸಂಗೋಪನೆ ಇಲಾಖೆಯಿಂದ ಸದ್ಯದಲ್ಲೇ ಆ್ಯಂಬುಲೆನ್ಸ್ ಸೇವೆ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದರು.

ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಸೇವೆ ಪ್ರಾರಂಭಿಸಲಾಗ್ತಿದ್ದು, ಈ ಮೂಲಕ ರೈತರ ಮನೆ ಬಾಗಿಲಿಗೆ ಪಶು ಆಸ್ಪತ್ರೆ ಬರಲಿದೆ. ಅತ್ಯಾಧ್ಯುನಿಕ, ಸುಸಜ್ಜಿತವಾದ ಈ ವಾಹನದಲ್ಲಿ ಶತತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್, ತುರ್ತು ಚಿಕಿತ್ಸಾ ಘಟಕ, ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳು ಇರಲಿವೆ ಎಂದು ಸಚಿವರು ಮಾಹಿತಿ ನೀಡಿದರು.

ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ್ದು, ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಚಿವರು, ತುರ್ತು ಸಮಯದಲ್ಲಿ ಈ ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಣೆ ಮಾಡುತ್ತಿದೆ. ಈ ಸೌಲಭ್ಯ ದಿನದ 24 ಗಂಟೆ ಲಭ್ಯವಾಗಲಿದ್ದು, ಟೋಲ್ ಫ್ರಿ ನಂಬರ್ ವ್ಯವಸ್ಥೆ ಸಹ ಮಾಡಲಾಗುತ್ತೆ. ಕರೆ ಮಾಡಿದ 4 ಗಂಟೆಯಲ್ಲಿ ಸೇವೆ ನೀಡಲು ಕ್ರಮ ಕೈಗೊಳ್ಳಲಾಗ್ತಿದ್ದು, ಕರೆ ಮಾಡಿದ ಮೊಬೈಲ್ ನಂಬರ್‌ಗೆ ಎಸ್‌ಎಂಎಸ್ ಮೂಲಕ ಮಾಹಿತಿ ಒದಗಿಸಲಾಗುತ್ತದೆ.

Related