ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೆಎಸ್ಆರ್ಟಿಸಿ ನೌಕರರು ಅಪಘಾತದಲ್ಲಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ಧನವಾಗಿ ನೀಡಲಾಗುತ್ತದೆ ಎಂದು ಈಗಾಗಲೇ ನಮಗೆ ಗೊತ್ತಿರುವ ಸಂಗತಿ.

ಅದರಂತೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರಿಗೂ ಕೂಡ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಕಸ್ಮಾತಾಗಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನಿಧಿ ನೀಡಲಾಗುವುದು ಎಂದು ತಿಳಿದು ಬಂದಿದೆ. ಇನ್ನು ಈ ಸೌಲಭ್ಯವು ಇಂದಿನಿಂದ ಜಾರಿಗೊಳ್ಳುಹಲಾಗುವುದು ಎಂದು ತಿಳಿದುಬಂದಿದೆ.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ. ಇನ್ನುಈ ಬಗ್ಗೆ ಮಾತನಾಡಿದ ಬಿಎಂಟಿಸಿ ಎಂಡಿ ರಾಮಚಂದ್ರನ್. ಆರ್, ಕೆಎಸ್​ಆರ್​ಟಿಸಿ ನೌಕರರು ಸಾವನ್ನಪ್ಪಿದರೆ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿ ನೌಕರರಿಗೆ ಕೇವಲ ಮೂರು ಲಕ್ಷ ರುಪಾಯಿ ಪರಿಹಾರವಿತ್ತು.

ಬಿಎಂಟಿಸಿಯ ನೌಕರರು ಕರ್ತವ್ಯದಲ್ಲಿರುವಾಗ ಮತ್ತು ಕರ್ತವ್ಯದಲ್ಲಿಲ್ಲದಿದ್ದಾಗಲೂ ಸಂಭವಿಸುವ ಅಪಘಾತಕ್ಕೂ 1 ಕೋಟಿ 15 ಲಕ್ಷ ರೂಪಾಯಿ ಪರಿಹಾರ ಸಿಗುತ್ತದೆ. ಸಿಬ್ಬಂದಿ ಸಾಮಾನ್ಯವಾಗಿ ಸಾವನ್ನಪ್ಪಿದರೆ 10 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ ಎಂದರು.

 

Related