ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್ ನೀಡುವ ಮೂಲಕ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದೆ ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ್ದು, ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಡಾ. ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ನವೆಂಬರ್ ಅಂತ್ಯದಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಾಧ್ಯಮದಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಅಂತ್ಯಕ್ಕೆ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದು, ರಾಜ್ಯದ 16 ಸೂಪರ್ ಸ್ಪೆಷಾಲಿಟಿ, 85 ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಜಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.                                         ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಕಾರ್ಯಸಿದ್ಧತೆ ಮಾಡಿಕೊಳ್ಳಲಾಗಿದೆ. 85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳಾಗಿ, 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್ ಗಳನ್ನಾಗಿ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

( ವರದಿಗಾರ, ಎ ಚಿದಾನಂದ)

Related