ರಾಜ್ಯ ಸರ್ಕಾರಕ್ಕೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಕಟ್ಟುವ ಯೋಗ್ಯತೆ ಇಲ್ಲ: ಆರ್ ಅಶೋಕ್

ರಾಜ್ಯ ಸರ್ಕಾರಕ್ಕೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಕಟ್ಟುವ ಯೋಗ್ಯತೆ ಇಲ್ಲ: ಆರ್ ಅಶೋಕ್

ರಾಯಚೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸುಮಾರು ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟದೆ, ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಅಂಗನವಾಡಿ ಬಾಡಿಗೆಯನ್ನು ಕಟ್ಟುತ್ತಿದ್ದಾರೆ ಎಂದು ವಿಪಕ್ಷ ನಾಯಕರು ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಡಮಂಡಲವಾಗಿದ್ದಾರೆ.

ರಾಜ್ಯದಲ್ಲಿರುವ ಅಂಗನವಾಡಿ ಕಟ್ಟಡಗಳಿಗೆ ಬಾಡಿಗೆ ಕಟ್ಟಲಾಗದಿದ್ದ ಸರ್ಕಾರ ಇದ್ದರೆಷ್ಟು, ಸತ್ತರೆಷ್ಟು ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಬಡ ಕುಟುಂಬದ ಗರ್ಭಿಣಿ ಮಹಿಳೆಯರು ಅಂಗನವಾಡಿಯಲ್ಲಿ ಸಿಗುವಂತಹ ಪೌಷ್ಟಿಕ ಆಹಾರಗಳನ್ನು ನಂಬಿಕೊಂಡು ತಮ್ಮ ಜೀವನವನ್ನು ಸಾಗಿಸುತ್ತಾರೆ.  ಆದರೆ ಬಡ ಜನಕ್ಕೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇನ್ನು ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ ಕಟ್ಟಡಗಳ ಕೋಟ್ಯಂತರ ರೂಪಾಯಿ ಬಾಡಿಗೆಯನ್ನು ಬಿಡುಗಡೆ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Related