ದೇಶದಲ್ಲೇ ಆನೆ ಸಂಪತ್ತು ಹೆಚ್ಚು ಹೊಂದಿರುವ ರಾಜ್ಯ ನಮ್ಮದು: ಸಿಎಂ

ದೇಶದಲ್ಲೇ ಆನೆ ಸಂಪತ್ತು ಹೆಚ್ಚು ಹೊಂದಿರುವ ರಾಜ್ಯ ನಮ್ಮದು: ಸಿಎಂ

ಬೆಂಗಳೂರು: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ವಿಧಾನಸೌಧದಲ್ಲಿ ಇಂದು (ಬುಧವಾರ ಮೇ 21) ರಂದು ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಇದನ್ನೂ ಓದಿ: ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ

ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.

Related