ರಾಜ್ಯಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಜೂ. 20ಕ್ಕೆ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್

ರಾಜ್ಯಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಜೂ. 20ಕ್ಕೆ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಕೂಡ ಒಂದಾಗಿದ್ದು, ಅನ್ನಬಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅಡ್ಡಿಗಾಲು ಹಾಕಿರುವುದರಿಂದ ಇದೇ ಜೂನ್ 20ಕ್ಕೆ ರಾಜ್ಯದಾದ್ಯಂತ ಕಾಂಗ್ರೆಸ್ ಸರ್ಕಾರವು ಪ್ರತಿಭಟನೆ ಕರೆ ನೀಡಿದೆ.

ಹೌದು, ಅಕ್ಕಿ ಖರೀದಿ ಬಗ್ಗೆ ಕರ್ನಾಟಕ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಜೋರಾಗಿದ್ದು, ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನಿಡಿದೆ. ಜೂನ್ 20ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.

ಈ ಬಗ್ಗೆ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೊದಲು ಅಕ್ಕಿ ಕೊಡುತ್ತೇವೆಂದಿದ್ದ FCI ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಇದು ಉದಾಹರಣೆಯಾಗಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ. ಭಾರತೀಯ ಜನತಾ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳಬೇಕು. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

 

Related