ಬೀದಿ ಬದಿ ವ್ಯಾಪಾರಿಗಳು ಲೈಸೆನ್ಸ್ ಪಡೆದು ವ್ಯಾಪಾರ ಮಾಡಬಹುದು: ಡಿಸಿಎಂ

ಬೀದಿ ಬದಿ ವ್ಯಾಪಾರಿಗಳು ಲೈಸೆನ್ಸ್ ಪಡೆದು ವ್ಯಾಪಾರ ಮಾಡಬಹುದು: ಡಿಸಿಎಂ

ಬೆಂಗಳೂರು: ಕಳೆದ ತಿಂಗಳು ನಗರದಲ್ಲಿ ಬೀದಿ ಬದಿ ವ್ಯಾಪಾರ ಮಾಡುವ ವ್ಯಾಪಾರಿಗಳನ್ನು ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದ್ದರು.

ಇನ್ನು ಇದನ್ನು ಖಂಡಿಸಿ ಇಂದು ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಹಬ್ಬ ಹರಿದಿನಗಳಲ್ಲಿ ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂದು ಬೀದಿಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ ಎಂದಿದ್ದಾರೆ. ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನದಲ್ಲೂ ಇದೆ. ಅವರು ಎರಡು ಮೂರು ಬಾರಿ ನನ್ನನ್ನೂ ಭೇಟಿ‌ ಮಾಡಿದ್ದರು.

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಸರಿಪಡಿಸಬೇಕು. ಫುಟ್ ಪಾತ್​ಗಳು ಜನರ ಓಡಾಟಕ್ಕೆ ಮುಕ್ತವಾಗಿರಬೇಕು. ಹೈ ಕೋರ್ಟ್ ಆರ್ಡರ್ ಇದೆ. ಅದನ್ನ ಪಾಲಿಸಬೇಕು. ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಎಲ್ಲಾ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ. ಫುಟ್ ಪಾತ್ ಓಡಾಟಕ್ಕೆ ತೊಂದರೆ ಆದಾಗ ನಾಗರಿಕರಿಂದ ನಮಗೂ ದೂರುಗಳು ಬಂದಿವೆ. ಕೋರ್ಟ್ ನಿರ್ದೆಶನ ಸಹ ಇದೆ. ಅದನ್ನ ನಾವು ಪಾಲಿಸಬೇಕು ಎಂದರು.

 

Related