ಎಲ್ಲಂದರಲ್ಲಿ ಕಸ ಬಿಸಾಕುವವರ ಅವರ ವಿರುದ್ಧ ಕಠಿಣ ಕ್ರಮ: ಡಿಸಿಎಂ

ಎಲ್ಲಂದರಲ್ಲಿ ಕಸ ಬಿಸಾಕುವವರ ಅವರ ವಿರುದ್ಧ ಕಠಿಣ ಕ್ರಮ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಎಲ್ಲಂದರಲ್ಲಿ ಕಸ ಬಿಸಾಕುವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣವನ್ನು ತಡೆಗಟ್ಟಲು ನಾವು ನಮ್ಮ ಮನೆ ಸುತ್ತ ಮುತ್ತ ಮತ್ತು ನಮ್ಮ ನಗರವನ್ನು ಸ್ವಚ್ಛವಾಗಿಟ್ಟಾಗ ಮಾತ್ರ ಸೊಳ್ಳೆ ಉತ್ಪತ್ತಿಯಾಗುವುದು ಕಡಿಮೆಯಾಗುತ್ತದೆ ಹಾಗಾಗಿ ಎಲ್ಲರೂ ತಮ್ಮ ಮನೆ ಸುತ್ತಮುತ್ತ ಮತ್ತು ಗ್ರಾಮ, ನಗರಗಳಲ್ಲಿ ಸ್ವಚ್ಛವಾಗಿ ಇಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಮನವಿ: ಡಿಕೆಶಿ

ಇನ್ನು ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್ ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮೆರ ಅಳವಡಿಸಲು ಸೂಚನೆ ನೀಡಲಾಗಿದೆ. ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ ಎಂದರು.

ಡೆಂಗಿ ನಿಯಂತ್ರಣಕ್ಕೆ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದರು.

Related