ಕೋವಿಡ್ ರೋಗಿಗಳನ್ನು ದಾಖಲಿಸಿಕೊಳ್ಳದಿದ್ದರೆ ಕಠಿಣ ಕ್ರಮ

ಕೋವಿಡ್ ರೋಗಿಗಳನ್ನು ದಾಖಲಿಸಿಕೊಳ್ಳದಿದ್ದರೆ ಕಠಿಣ ಕ್ರಮ

ಹಾವೇರಿ : ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಪಾಸಿಟಿವ್ ವ್ಯಕ್ತಿಗಳ ದಾಖಲಾತಿ, ಚಿಕಿತ್ಸೆ, ವೈದ್ಯರ ಹಾಜರಾತಿ ಸೇರಿದಂತೆ ಸಮಗ್ರ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಗೆ ಉಪ ವಿಭಾಗಾಧಿಕಾರಿಗಳನ್ನು ನೇಮಕಮಾಡಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

ಕೋವಿಡ್ ನಿರ್ವಹಣೆ, ಮಳೆಹಾನಿ, ನೆರೆ ಪರಿಸ್ಥಿತಿ ಕುರಿತಂತೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯವೈಖರಿ ಹಾಗೂ ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆ ಸರ್ವೇ ಕುರಿತಂತೆ ಮಾಹಿತಿ ಪಡೆದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಆಸ್ಪತ್ತೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಗೆ ಬೆಡ್ ಖಾಲಿ ಇದ್ದರೂ ಬೆಡ್ಗಳು ಇಲ್ಲ ಎಂದು ರೋಗಿಗಳನ್ನು ದಾಖಲುಮಾಡಿಕೊಳ್ಳದೆ ವಾಪಸ್ ಕಳುಹಿಸುತ್ತಿರುವ ದೂರುಗಳು ಬಂದಿವೆ. ಇಂತಹ ಘಟನೆಗಳು ಮರುಕಳಿಸಬಾರದು.

ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಆಸಕ್ತಿ ತೋರುತ್ತಿಲ್ಲ. ಸರ್ಕಾರಿ ಸೇವೆಗಿಂತ ಖಾಸಗಿ ಸೇವೆಯಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬರುವುದಿಲ್ಲ. ರ‍್ಸ್ಗಳ ಮೇಲೆ ಚಿಕಿತ್ಸೆಯ ಹೊಣೆಗಾರಿಕೆ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎಲ್ಲ ವೈದ್ಯಕೀಯ ಸೌಲಭ್ಯಗಳು ಇದ್ದಾಗ್ಯೂ ಇಂತಹ ದೂರುಗಳು ಬರುತ್ತಿರುವ ಕುರಿತಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Related