ರಾಣೆಬೆನ್ನೂರಿನಲ್ಲಿ ಬಂದ್ ನಿರಾಸೆ

ರಾಣೆಬೆನ್ನೂರಿನಲ್ಲಿ ಬಂದ್ ನಿರಾಸೆ

ರಾಣೇಬೆನ್ನೂರ : ಕೃಷಿ ಕಾಯಿದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ನಗರದಲ್ಲಿ ಸೋಮವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಲ್ಲಿನ ಕೆಇಬಿ ವಿನಾಯಕ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪೊಸ್ಟ್‌ ಸರ್ಕಲ್‌ ಬಳಿ ಕೆಲಕಾಲ ಪ್ರತಿಭಟಿಸಿ ಸರ್ಕಾರದ  ವಿರುದ್ಧ ಘೋಷಣೆಗಳನ್ನು ಕೂಗಿದರು.

ರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ಕಾಯ್ದೆಗಳನ್ನು ಜಾರಿಗೆ ತಂದು ರೈತರಿಗೆ ಮರಣಶಾಸನ ಬರೆಯಲು ಯತ್ನಿಸಿದೆ. ಭವಿಷ್ಯದಲ್ಲಿ ಕೃಷಿ ಭೂಮಿ ಕಿಂಚಿತ್ತೂ ಉಳಿಯದ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ಭೂ ಸುಧಾರಣೆ ಕಾಯ್ದೆಗೆ ತಂದಿರುವ ತಿದ್ದುಪಡಿ ಕೈ ಬಿಡಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ತಹಸೀಲ್ದಾರ್ ಬಸನಗೌಡ ಕೋಟೂರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Related