ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವವರೆಗೂ ಹೋರಾಟ

ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವವರೆಗೂ ಹೋರಾಟ

ಬೆಂಗಳೂರು : ನನಗೆ ಸಿ.ಪಿ ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು.

ಪಕ್ಷದ ಕೆಲವು ಶಾಸಕರು ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ.

ಸದಾಶಿವ ನಗರದ ತಮ್ಮ ನಿವಾಸದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬಿಜೆಪಿ ಹಿರಿಯ ನಾಯಕ ಪ್ರಭಾಕರ ಕೋರೆಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದೇನೆ. ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಆದರೆ ಅವರ ಹಿತ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಪರೋಕ್ಷವಾಗಿ ಮೂಲ ಬಿಜೆಪಿ ಶಾಸಕರಿಗೆ ತಿರುಗೇಟು ನೀಡಿದ್ದಾರೆ.

Related