ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು

  • In State
  • September 17, 2022
  • 186 Views
ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು

ಮದ್ದೂರು: ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ.

ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ರವರು ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.

ಇದೇ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರಮೋದಿಯವರ ಹುಟ್ಟು ಹಬ್ಬದ ಹಿನ್ನೆಲೆ ಮಿಮ್ಸ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ, ಮಿಮ್ಸ್ ನಿರ್ದೇಶಕರಾದ ಮಹೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related