ದ್ವಾರಕೀಶ್ ಅಂತಿಮ ದರ್ಶನ ಪಡೆದ ಸುದೀಪ್

ದ್ವಾರಕೀಶ್ ಅಂತಿಮ ದರ್ಶನ ಪಡೆದ ಸುದೀಪ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೇಶ್ ಅವರು ನಿನ್ನೆ ಹೃದಯಾಘಾತದಿಂದ ಇಹಾಲೋಕ ತ್ಯಜಿಸಿದ್ದಾರೆ.

ಇಂದು ಅವರ ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ನೆರವೇರಿಸಲಾಗಿದ್ದು ಕಿಚ್ಚ ಸುದೀಪ್ ಅವರು ದ್ವಾರಕೀಶ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ಸುದೀಪ್ ಅವರು ಮ್ಯಾಕ್ಸ್ ಚಿತ್ರದ ಶೂಟಿಂಗ್ ಆಗಿ ಚೆನ್ನೈಗೆ ತೆರಳಿದ್ದರು. ಇಂದು ಬೆಂಗಳೂರಿಗೆ ಆಗಮಿಸಿ, ದ್ವಾರಕೇಶ್ ಅವರ ಅಂತಿಮ ದರ್ಶನ ಪಡೆದು ಅವರ ಕುಟುಂಬದವರ ದುಃಖದಲ್ಲಿ ಭಾಗಿಯಾಗಿದ್ದಾರೆ.

ದ್ವಾರಕೀಶ್ ಬ್ಯಾನರ್ ನಲ್ಲಿ ಸುದೀಪ್ ಸಿನಿಮಾ ಮಾಡಿದ್ದರು. ವಿಷ್ಣುವರ್ಧನ್ ಹೆಸರಿನ ಈ ಸಿನಿಮಾ ದ್ವಾರಕೀಶ್ ಅವರ ಆರ್ಥಿಕ ಸ್ಥಿತಿಯನ್ನು ಚೇತರಿಕೆ ಕಾಣುವಂತೆ ಮಾಡಿತ್ತು.

ಇನ್ನು ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಟಿ.ಆರ್ ಮಿಲ್ ರುದ್ರಭೂಮಿಯಲ್ಲಿ ಮಾಡುವುದಾಗಿ ದ್ವಾರಕೀಶ್ ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ.

 

Related