ಸಿಎಂ ಯಡಿಯೂರಪ್ಪಗೆ ಸಮನ್ಸ್ ಜಾರಿ

ಸಿಎಂ ಯಡಿಯೂರಪ್ಪಗೆ ಸಮನ್ಸ್ ಜಾರಿ

ಬೆಳಗಾವಿ ಗೋಕಾಕ್ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಂಬ0ಧಿಸಿದ0ತೆ ಸೆಪ್ಟೆಂಬರ್ ೧ ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಗೋಕಾಕ್ ಸಿವಿಲ್ ಜಡ್ಜ್ ಎಒಈಅ ಕೋರ್ಟ್  ಸಮನ್ಸ್ ಜಾರಿ ಮಾಡಿದೆ.

ಗೋಕಾಕ್ ಉಪಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು, ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದಡಿ ಗೋಕಾಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬ0ಧಿಸಿದ0ತೆ ಗೋಕಾಕ್ ಪೋಲೀಸ್ ಠಾಣೆಯಿಂದ ನ್ಯಾಯಾಲಯದಲ್ಲಿ ರಿಪೋರ್ಟ್ ಸಲ್ಲಿಕೆಯಾಗಿತ್ತು.

Related