ನೀಟ್, ಜೆಇಇ ಪರೀಕ್ಷೆ ಮುಂದೂಡಲ್ಲ

ನೀಟ್, ಜೆಇಇ ಪರೀಕ್ಷೆ ಮುಂದೂಡಲ್ಲ

ನವದೆಹಲಿ: ರಾಷ್ಟ್ರಿಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಹಾಗೂ ಜಂಟಿ ಪ್ರವೇಶ ಪರೀಕ್ಷೆ (JEE) ಪರೀಕ್ಷೆ ಮುಂದೂಡಿಕೆ ಬಗ್ಗೆ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದ್ದು, ನಿಗದಿಯಂತೆ ಸೆಪ್ಟೆಂಬರ್‍ನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದೆ.

ಕೋವಿಡ್ 19 ಹಿನ್ನೆಲೆ ನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಬೇಕು ಎಂದು 11 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಾಮೂರ್ತಿ ಅರುಣ್ ಮಿಶ್ರಾ, ಕೊರೋನಾ ಇನ್ನು ಹಲವು ವರ್ಷ ಮುಂದುವರೆದಲ್ಲಿ ನೀವು ಮತ್ತೊಂದು ವರ್ಷವೂ ಪರೀಕ್ಷೆ ಬರೆಯದೇ ಇರುತ್ತೀರಾ ಎಂದು ಪ್ರಶ್ನಿಸಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

Related