ಪರೀಕ್ಷೆಗೆ ಸುಪ್ರೀಂ ಸಿಗ್ನಲ್

ಪರೀಕ್ಷೆಗೆ ಸುಪ್ರೀಂ ಸಿಗ್ನಲ್

ನವದೆಹಲಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಮೂರ್ತಿ ಗಳಾದ ಎಲ್.ನಾಗೇಶ್ವರ್‌ರಾವ್, ನ್ಯಾ.ಕೃಷ್ಣಮುರಾರಿ, ನ್ಯಾ. ಎಸ್.ರವೀಂದ್ರಭಟ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಇಂದು ಅರ್ಜಿ ವಿಚಾರಣೆಗೆ ಬಂದು ರಾಜ್ಯ ಸರ್ಕಾರದ ವಾದವನ್ನು ಪುರಸ್ಕರಿಸಿ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಈಗಾಗಲೇ ನಿಗದಿ ಪಡಿಸಿರುವಂತೆ ಜೂ.25ರಿಂದ ಜು.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವುದು ನಿಶ್ಚಿತವಾಗಿದೆ. ಇದರಿಂದಾಗಿ ಕಾನೂನು ತೊಡಕು ನಿವಾರಣೆಯಾಗಿದೆ. ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೊರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.

Related