ಉಡುಪಿ ಮಾರಿಯಮ್ಮ ದೇವಿಯ ದರ್ಶನ ಪಡೆದ ಸೂರ್ಯಕುಮಾರ್‌ ದಂಪತಿ

ಉಡುಪಿ ಮಾರಿಯಮ್ಮ ದೇವಿಯ ದರ್ಶನ ಪಡೆದ ಸೂರ್ಯಕುಮಾರ್‌ ದಂಪತಿ

ಉಡುಪಿ: ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟರ್‌ ಸೂರ್ಯ ಕುಮಾರ್ ಯಾದವ್ ಉಡುಪಿಯ ಕಾಪು ಶ್ರೀ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ…ಇನ್ನು ಜೋಡಿಗೆ ದೇವಸ್ಥಾನ ಮಂಡಳಿಯವರು ಮತ್ತು ಸ್ಥಳೀಯರು ಭವ್ಯ ಸ್ವಾಗತ ಕೋರಿದ್ದಾರೆ.

ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಸೂರ್ಯ ಕುಮಾರ್ ಯಾದವ್, ವರ್ಲ್ಡ್ ಕಪ್ ಸೆಲೆಬ್ರೇಶನ್ ಜನಸ್ತೋಮ ನೋಡಿ ಬಹಳ ಖುಷಿಯಾಯಿತು. ಕಾಪುವಿನಲ್ಲಿ ಕೂಡ ಜನರು ಪ್ರೀತಿಯಿಂದ ಬರಮಾಡಿಕೊಂಡದ್ದು ಮನಸ್ಸಿಗೆ ಮುಟ್ಟಿತು. ದೇವಸ್ಥಾನದಲ್ಲಿ ಇಷ್ಟು ಮಂದಿ ಸೇರುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ. ಇದನ್ನೂ ಓದಿ:ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ..!

ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭ ಬರಬೇಕು ಎಂಬ ಇಚ್ಛೆ ಇದೆ. ಆ ಸಂದರ್ಭದಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿ ಬರುತ್ತೇನೆ ಎಂದು ಹೇಳಿದ್ದಾರೆ.

Related