ಸ್ವಾಮೀಜಿಗಳು ರಾಜಕಾರಣದ ಸುದ್ದಿಗೆ ಬರಬೇಡಿ: ಡಿಕೆಶಿ

ಸ್ವಾಮೀಜಿಗಳು ರಾಜಕಾರಣದ ಸುದ್ದಿಗೆ ಬರಬೇಡಿ: ಡಿಕೆಶಿ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಚಂದ್ರಶೇಖರ ಸ್ವಾಮೀಜಿಯವರು ಮನವಿ ಮಾಡಿದ್ದರು.

ಈ ಕುರಿತಂತೆ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಇಂದು (ಶನಿವಾರ ಜೂನ್‌ 29)  ಪ್ರತಿಕ್ರಿಯೆಸಿದ್ದು, ಯಾವ ಸ್ವಾಮೀಜಿಗಳು ಮಾತನಾಡಿಲ್ಲ, ಇವತ್ತೇ ಮಾತನಾಡಿದ್ದು ಅವರು. ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ ಎಂದು. ಇದನ್ನೂ ಓದಿ: ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿಕೆಶಿ ಎಚ್ಚರಿಕೆ

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿಗಳಿಗೆ ಹೇಳಿಕೊಟ್ಟು ಹೇಳಿಕೆ ನೀಡಿಸಲಾಗಿದೆ ಎನ್ನುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪರಮೇಶ್ವರ್ ಅವರ ಸಂಭಾಷಣೆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆ, ರಾಜ್ಯದ ಅಭಿವೃದ್ಧಿ, ಬಾಕಿ ಇರುವ

ಯೋಜನೆಗಳು, ಅನುದಾನದಲ್ಲಿ ನ್ಯಾಯ ಒದಗಿಸುವ, ರಾಜ್ಯದ ಬೇಡಿಕೆಗಳ ವಿಚಾರವಾಗಿ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರು ಹಾಗೂ ಸಚಿವರ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಎರಡು ಗಂಟೆಗಳ ಕಾಲ ನಮ್ಮ ಚರ್ಚೆಯಲ್ಲಿ ಭಾಗವಹಿಸಿದ್ದರು. ನಂತರ ಎಲ್ಲರು ಒಟ್ಟಿಗೆ ಊಟ ಮಾಡಿದೆವು ಎಂದರು.

ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಯಿತು. ಹೆದ್ದಾರಿ ಕಾಮಗಾರಿಗಳಿಗೆ ಎಲ್ಲೆಲ್ಲಿ ಅಡಚಣೆಯಿದೆ ಆ ಭಾಗದ ಶಾಸಕರ ಜೊತೆ ಮಾತನಾಡಲಾಗುವುದು. ಅನೇಕ ಕಡೆ ದೇವಸ್ಥಾನಗಳಿವೆ. ಅವುಗಳನ್ನು ಮುಟ್ಟಬೇಡಿ ಎಂದು ಹೇಳುತ್ತಾರೆ. ಹೀಗೆ ಅನೇಕ ಸಮಸ್ಯೆಗಳಿವೆ, ಈ ಎಲ್ಲದರ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡಲಾಗುವುದು.

ಅಲ್ಲೆಲ್ಲಾ ಮಾರ್ಗ ಬದಲಾವಣೆ ಮಾಡಲು ಆಗುತ್ತದೆಯೇ ಹಾಗೂ ರೈತರ ವಿರೋಧ ಇರುವ ಕಡೆ ಏನು ಮಾಡುವುದು ಎಂದು ಚರ್ಚೆ ನಡೆಸಲಾಯಿತು. ಇಂದು ಸಂಜೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

 

Related