ಬೆಂಗಳೂರು ನಗರವಾಸಿಗಳಿಗೆ ಸಿಹಿ ಸುದ್ದಿ..!

ಬೆಂಗಳೂರು ನಗರವಾಸಿಗಳಿಗೆ ಸಿಹಿ ಸುದ್ದಿ..!

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಾರ್ಕ ಗಳು ಕೇವಲ ಬೆಳಗಿನ ಜಾವ ಮತ್ತು ಸಾಯಂಕಾಲದ ಜಾವ ತೆರೆವುತ್ತಿದ್ದವು.  ಆದರಿ ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಡಿಯಲ್ಲಿರುವ ಎಲ್ಲಾ ಪಾರ್ಕ್ಗಳು ಬೆಳಿಗ್ಗೆ 05:00 ಯಿಂದ ರಾತ್ರಿ 10:00ವರೆಗೆ ತೆರೆಯುತ್ತವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.

ಬೆಂಗಳೂರಿನ ಎಲ್ಲಾ 1,200 ನೆರೆಹೊರೆಯ ಉದ್ಯಾನವನಗಳು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಹಿಂದೆ ಬೆಂಗಳೂರು ನಗರ ವ್ಯಾಪ್ತಿಯ ಉದ್ಯಾನವನಗಳು ಮಧ್ಯಾಹ್ನದಿಂದ ಸಂಜೆ 5 ಗಂಟೆಯವರೆಗೆ ಮುಚ್ಚಿರುತ್ತಿದ್ದವು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಅರಣ್ಯ, ಪರಿಸರ ಹಾಗೂ ಹವಾಮಾನ ವೈಪರೀತ್ಯ ನಿರ್ವಹಣೆ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.

Related