ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ..!

ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ..!

ಟಿ20 ವಿಶ್ವಕಪ್ 2024ನೇ ಸಾಲಿನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದೆ. ಇನ್ನು ಟಿ-20 ವಿಶ್ವಕಪ್ 2024 ಪಂದ್ಯಾವಳಿ ನಂತರ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕಿಂಗ್  ಸುದ್ದಿಯನ್ನುನೀಡಿದ್ದರು.

ಆದರೆ ಈಗ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಬಾಲ್ಯದ ಕೋಚ್ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಹೌದು, ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಅವರು ಇನ್ನೂ ಹಲವು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಮುಂದುವರೆಯುತ್ತಾರೆ ಮತ್ತು ಏಕದಿನ ಪಂದ್ಯದಲ್ಲೂ ಕೂಡ ಮುಂದುವರೆಯುತ್ತಾರೆ ಎಂಬ ಭರವಸೆಯನ್ನು ನೀಡಿದ್ದಾರೆ ಇದರಿಂದ ಕೊಹ್ಲಿ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂತಸ ಮೂಡಿದೆ. ಇದನ್ನೂ ಓದಿ: ಪ್ರಧಾನಿ ಭೇಟಿಯಾದ ಟೀಮ್ ಇಂಡಿಯಾ ಆಟಗಾರರು

ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ಕಿಂಗ್ ಕೊಹ್ಲಿ ಇನ್ನೂ ಹಲವು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾ ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ ಬಾಲ್ಯದ ಕೋಚ್ ಅನ್ನು ಭೇಟಿಯಾಗಿದ್ದರು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ರಾಜ್​ಕುಮಾರ್ ಶರ್ಮಾ ವಿದಾಯದ ಬಗ್ಗೆ ಕೂಡ ಮಾತನಾಡಿದ್ದಾರೆ.

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಗೆದ್ದಿರುವುದು ಖುಷಿಯ ವಿಚಾರ. ನಾನು ವಿರಾಟ್ ಜೊತೆ ಮಾತನಾಡಿದ್ದೇನೆ. ಅವರು ಮುಂದಿನ ಹಲವು ವರ್ಷಗಳವರೆಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಇನ್ನೂ ಕೆಲ ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಆಡುಂವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ರಾಜ್​ಕುಮಾರ್ ಶರ್ಮಾ ತಿಳಿಸಿದ್ದಾರೆ.

ಇದರೊಂದಿಗೆ 2025 ರಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವುದಿಲ್ಲ ಎಂಬುದು ಖಚಿತವಾಗಿದೆ. ಅಲ್ಲದೆ ಸದ್ಯ ಟಿ20 ಅಂತಾರಾಷ್ಟ್ರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕಾರಣ ಒಂದಷ್ಟು ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಸ್ವರೂಪಗಳಲ್ಲಿ ಮುಂದುವರೆಯುವುದನ್ನು ಎದುರು ನೋಡಬಹುದು.

 

Related