ಟಿ20 ವಿಶ್ವಕಪ್; ಫೈನಲ್ ಪಂದ್ಯಕ್ಕೆ ಕ್ಷಣಗಣನೆ

ಟಿ20 ವಿಶ್ವಕಪ್; ಫೈನಲ್ ಪಂದ್ಯಕ್ಕೆ ಕ್ಷಣಗಣನೆ

ಕ್ರಿಕೆಟ್ ಅಭಿಮಾನಿಗಳಿಗೆ ಇಂದು ಮಹತ್ವದ ದಿನ. ಯಾಕೆಂದರೆ ಇಂದು ಟಿ20 ಫೈನಲ್ ಪಂದ್ಯಾವಳಿಗಳು ನಡೆಯುತ್ತಿದ್ದು, ಇಂಡಿಯಾ ಮತ್ತು ಸೌತ್ ಆಫ್ರಿಕಾ ನಡುವೆ ರೋಚಕ ಹಣಾಹಣಿ ಪಂದ್ಯ ಇದಾಗಿದ್ದು, ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟೀಮ್ ಇಂಡಿಯಾ ಸತತ 17 ವರ್ಷಗಳ ಬಳಿಕ ಮತ್ತೊಮ್ಮೆ ಟ್ರೋಫಿ ಎತ್ತಿಹಿಡಿಯಲು ಕಾಯುತ್ತಿದೆ.

ಹೌದು, ಇಂದು (ಜೂನ್.29) ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಟೀಮ್ ಇಂಡಿಯಾ ಆಡಿರುವ 7 ಪಂದ್ಯಗಳಲ್ಲೂ ವಿಜಯ ಸಾಧಿಸಿದರೆ, ಅತ್ತ ಸೌತ್ ಆಫ್ರಿಕಾ 8 ಮ್ಯಾಚ್​ಗಳನ್ನು ಗೆದ್ದು ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಹೀಗಾಗಿ ಫೈನಲ್​ನಲ್ಲಿ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್​ವರ್ಕ್​ನ ಎಲ್ಲಾ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್​ನಲ್ಲಿ ಉಚಿತ ನೇರ ಪ್ರಸಾರ ಇರಲಿದೆ.

 

Related