ಜಿಲ್ಲೆಯನ್ನಾಗಿಸಲು ಕ್ರಮ ವಹಿಸಿ

ಜಿಲ್ಲೆಯನ್ನಾಗಿಸಲು ಕ್ರಮ ವಹಿಸಿ

ಕೊಪ್ಪಳ : ಜಿಲ್ಲೆಯಲ್ಲಿ ಕೆಲವು ಮಕ್ಕಳು ರಕ್ತಹೀನತೆ, ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಅವರನ್ನು ಗುರುತಿಸಿ ಮಕ್ಕಳಿಗೆ ಉತ್ತಮ ಪೌಷ್ಠಿಕ ಆಹಾರ ಸೇವಿಸುವಂತೆ ಅರಿವು ಮೂಡಿಸಬೇಕು. ಈ ಮೂಲಕ ಜಂತುಹುಳು ರಹಿತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೆಪ್ಟೆಂಬರ್ 07ರಂದು 2020-21ನೇ ಸಾಲಿನ ರಾಷ್ಟ್ರೀಯ  ಜಂತುಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಜಿ.ಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ (ಆಗಸ್ಟ್.31) ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕಾರಿಗಳು ತಾವು ತಯಾರಿಸಿಕೊಂಡ ಕ್ರಿಯಾಯೋಜನೆ ಪ್ರಕಾರ ಜಿಲ್ಲೆಯ 01-19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸಿ, ಮಕ್ಕಳಿಗೆ ಮಾತ್ರೆ ನೀಡಬೇಕು ಹಾಗೂ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

Related