‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನದಲ್ಲಿ ಪಾಲ್ಗೊಳ್ಳಿ

‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನದಲ್ಲಿ ಪಾಲ್ಗೊಳ್ಳಿ

ಔರಾದ್ : ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಜನರಲ್ಲಿ ಕನ್ನಡ ಭಾಷಾಭಿಮಾನ ಬೆಳೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕನ್ನಡಕ್ಕಾಗಿ ನಾವು ‘ಮಾತಾಡ್ ಮಾತಾಡ್ ಕನ್ನಡ’ ಎಂಬ ಅಭಿಯಾನ ನಡೆಸುತ್ತಿದ್ದು, ಜಿಲ್ಲೆಯ ಜನರು ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಕೋರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಕರ್ನಾಟಕ ರಾಜ್ಯೋತ್ಸವವನ್ನು ಕೇವಲ ನವೆಂಬರ್ 1ಕ್ಕೆ ಮಾತ್ರ ಸೀಮಿತಗೊಳಿಸದೇ ಕನ್ನಡದ ಘಮವನ್ನು ಪ್ರತಿ ಮನೆ-ಮನಗಳಿಗೆ ತಲುಪಿಸಲು ಮುಂದಾಗಿರುವುದು ಶ್ಲಾಘನೀಯವಾದದ್ದು, ಅಭಿಯಾನವು ಅಕ್ಟೋಬರ್ 24 ರಿಂದ 30ರವರೆಗೆ ಒಂದು ವಾರಗಳ ಕಾಲ ಜರುಗಲಿದ್ದು, ರಾಜ್ಯದ ಗಡಿಭಾಗಗಳಾದ ಮಹಾರಾಷ್ಟç, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ ರಾಜ್ಯಗಳಿಗೆ ಹೊಂದಿಕೊAಡಿರುವ ತಾಲ್ಲೂಕು ಪ್ರದೇಶಗಳಲ್ಲಿ ನಾಡಿನ ಸಂಸ್ಕೃತಿ ಭಾಷೆ, ಸಾಹಿತ್ಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತದೆ. ಕನ್ನಡಕ್ಕಾಗಿ ನಾವು ಅಭಿಯಾನದಡಿ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸಿ, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಬಹುಮಾನಗಳನ್ನು ನೀಡಲಾಗುತ್ತಿದೆ. ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಗಾಗಿ ವೆಬ್‌ಲಿಂಕ್: hಣಣಠಿs://ಜಿoಡಿms.gಟe/ಅಖಜಿಕಿಂZoಟಿSಉಕಿh83Sಜಿ7,hಣಣಠಿs://ಜಿoಡಿms.gಟe/ಅಖಜಿಕಿAZoಟಿSಉಕಿh83Sಜಿ7 ತೆರೆದು ಅಗತ್ಯ ಮಾಹಿತಿ, ವಿಡಿಯೋಗಳನ್ನು ಕಳುಹಿಸಬಹುದು. ಕರ್ನಾಟಕ ರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳ್ಳಬಾರದು. ನಾಡಿನ ಎಲ್ಲರೂ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವ ಮೂಲಕ ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಪ್ರೋತ್ಸಾಹಿಸಬೇಕು. ಅನ್ಯ ಭಾಷೆ ಪದಗಳ ಬಳಕೆಯನ್ನು ತಗ್ಗಿಸಿ, ಶುದ್ಧ ಕನ್ನಡ ಮಾತನಾಡಲು ಪ್ರಯತ್ನಿಸಬೇಕು. ನಾಡಿನಲ್ಲಿ ಸದಾ ಕನ್ನಡಮಯ ವಾತಾವರಣ ನಿರ್ಮಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

Related