ಪ್ರತಿಭಾ ಪುರಸ್ಕಾರ ಸಮಾರಂಭ

ಪ್ರತಿಭಾ ಪುರಸ್ಕಾರ ಸಮಾರಂಭ

ಬೆಂಗಳೂರು: 2024ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಇಂದು (ಬುಧವಾರ ಜೂನ್ 19) ರಂದು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಬೆಂಗಳೂರಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ರಾಜ್ಯಾದ್ಯಂತ ಸುಮಾರು 820 ಕ್ಕೂ ಹೆಚ್ಚಿನ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿ ಸಮಾಜದ ಕೆಳಸ್ತರಗಳಿಂದ ಬಂದಂತಹ ಸುಮಾರು 2.1 ಲಕ್ಷ ವಿದ್ಯಾರ್ಥಿಗಳು ವಿದ್ಯೆ ಕಲಿಯುತ್ತಿದ್ದಾರೆ.

2024 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ನೋಡಿದಾಗ ನಮ್ಮ ಕ್ರೈಸ್ ಶಾಲೆಯ ಮಕ್ಕಳು ಉತ್ತಮ ಸಾಧನೆಯನ್ನು ಮಾಡಿದ್ದು, ರಾಜ್ಯಕ್ಕೇ ಮೊದಲ ಹಾಗೂ ಮೂರನೇ ಸ್ಥಾನವನ್ನು ಪಡೆದು, ಸರ್ಕಾರಿ ವಸತಿ ಶಾಲೆಗಳ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ.

ಇದರ ಜೊತೆಗೆ ನಮ್ಮ ವಸತಿ ಶಾಲೆಗಳ ವಿದ್ಯಾರ್ಥಿಗಳ ಪೈಕಿ ಸುಮಾರು 650 ಮಂದಿ ವಿದ್ಯಾರ್ಥಿಗಳು 96% ಗೂ ಅಧಿಕ ಅಂಕಗಳನ್ನು ಗಳಿಸಿದ್ದು, ಎನ್ ಸಿ ಸಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಗಮನಾರ್ಹ ಸಾಧನೆ ಮಾಡಿರುತ್ತಾರೆ ಎಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಛಿಸುತ್ತಿದ್ದೇವೆ.

ಕ್ರೈಸ್ ವಸತಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಗಮನದಲ್ಲಿ ಇಟ್ಟುಕೊಂಡು ಅವರಿಗೆ ಆಧುನಿಕ ಸೌಲಭ್ಯಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪುಗೊಂಡಂತಹ ಸಂಸ್ಥೆಯಾಗಿದ್ದು ಲಕ್ಷಾಂತರ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇದು ಸಹಾಯ ಮಾಡುತ್ತಿದೆ.

ಇನ್ನು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆಯೂ ಸಾಕಷ್ಟು ಕಾಳಜಿ ಇಟ್ಟುಕೊಂಡಿರುವ ನಮ್ಮ ಇಲಾಖೆಯ ಅಡಿಯಲ್ಲಿ ಹೆಣ್ಣು ಮಕ್ಕಳಿಗಾಗಿಯೇ ಪ್ರತ್ಯೇಕ 208 ವಸತಿ ಶಾಲೆಗಳು ಇದ್ದು, ಮಹಿಳಾ ಸಬಲೀಕರಣದ ದೃಷ್ಟಿಯಿಂದ ಇದೊಂದು ಮಹತ್ವದ ಹೆಜ್ಜೆ ಆಗಿದೆ.

ಸರ್ಕಾರಿ ಸ್ವಾಮ್ಯದ ಶಾಲೆಗಳು ಉತ್ತಮ ಸಾಧನೆ ಮಾಡಿರುವಂತಹ ಸಂದರ್ಭದಲ್ಲಿ ಅವರನ್ನು ಗುರುತಿಸಿ ಗೌರವಿಸಿದರೆ ಅದು ಉತ್ತಮ ಶೈಕ್ಷಣಿಕ ಪರಂಪರೆಗೆ ನಾಂದಿ ಹಾಡಬಲ್ಲದು ಎಂಬುದು ನಮ್ಮ ಸರ್ಕಾರದ ಅಭಿಪ್ರಾಯವಾಗಿದೆ.

ಈ ಹಿನ್ನಲೆಯಲ್ಲಿ ನಮ್ಮ ಸರ್ಕಾರವು ಈ ಬಾರಿಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ  ಅಂಕ ಗಳಿಸುವುದರ ಜೊತೆಗೆ ಎನ್ ಸಿ ಸಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಗಮನಾರ್ಹ ಸಾಧನೆ ಮಾಡಿರುವ ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ವಸತಿ ಶಾಲೆಗಳ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಗೌರವಿಸಲು ನಿರ್ಧರಿಸಿದ್ದು, ರಾಜ್ಯದ ವಸತಿ ಶಾಲೆಗಳ ಇತಿಹಾಸದಲ್ಲೇ ಇದೊಂದು ಮಹತ್ವದ ಬೆಳವಣಿಗೆ ಆಗಿದ್ದು, ಇದರಿಂದ ಮಕ್ಕಳು ಸ್ಪೂರ್ತಿ ಪಡೆಯುವುದರಲ್ಲಿ ಯಾವ ಅನುಮಾನವಿಲ್ಲ.

Related