ಟಂಟಂ ವಾಹನ ಪಲ್ಟಿ; ತಪ್ಪಿದ ದುರಂತ

ಟಂಟಂ ವಾಹನ ಪಲ್ಟಿ; ತಪ್ಪಿದ ದುರಂತ

ಶಹಾಪುರ: ಇತ್ತಿಚೆಗಷ್ಟೇ ರಾಯಚೂರು ಜಿಲ್ಲೆಯ ಮಾನ್ವಿ ಬಳಿ ನಡೆದ ಶಾಲಾ ಬಸ್ ದುರಂತದ ಕಹಿ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂತಹುದೇ ಘಟನೆ ಕೂದಳೆಯ ಅಂತರದಲ್ಲಿ ತಪ್ಪಿದಂತಾಗಿದೆ.
ನಗರದ ಕೆಇಬಿ ಹತ್ತಿರ ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೊಗುತ್ತಿದ್ದ ಆಟೋವೊಂದು ಪಲ್ಟಿಯಾಗಿದ್ದು, ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ಎದುರಿಗೆ ಬಂದ ಬೈಕ್ ಸವಾರನನ್ನು ತಪ್ಪಿಸಲು ಆಟೋವನ್ನು ಬಲಕ್ಕೆ ಎಳೆದುಕೊಂಡ ಚಾಲಕ ತನ್ನ ಆಯತಪ್ಪಿ ಪಲ್ಟಿಯಾಗಿದೆ. 6 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಆಟೋ ಪಲ್ಟಿಯಾಗಿದ್ದು, ಭಾರೀ ದುರಂತ ತಪ್ಪಿದೆ. ಟಂಟಂ ವಾಹನದಲ್ಲಿದ್ದ ಮಕ್ಕಳು ಡಿಡಿಯು ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಾಗಿದ್ದು,  ಶಾಲೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಆಟೋ ಪಲ್ಟಿಯಾಗಿದ್ದು 3 ಜನ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳನ್ನು ತಾಲೂಕ ಆಸ್ಪತ್ರೆಗೆ ದಾಖಲಿಸಿದ್ದು, ಸಣ್ಣ-ಪುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Related