ಬೆಂಗಳೂರು: ಇತ್ತೀಚಿಗಷ್ಟೇ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಮೊಂತೆರೋ ಇವರಿಬ್ಬರ ಲವ್ ಕಹಾನಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಅದರಂತೆ ಇದೀಗ ಈ ಜೋಡಿಗಳು ಹಸಿಮನೆ ಏರಲು ಸಜ್ಜಾಗಿದ್ದಾರೆ.
ಹೌದು, ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಮೊಂತೆರೋ ಅವರ ವಿವಾಹ ಡೇಟ್ ಫಿಕ್ಸ್ ಆಗಿದ್ದು, ಇದೀಗ ಈ ಜೋಡಿಗಳು ಫ್ರೀ ವೆಡ್ಡಿಂಗ್ ಶೂಟ್ ಮಾಡಿಸಿರುವ ವಿಡಿಯೋ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗ್ತಿವೆ.
ಇನ್ನು ಪ್ರೀ ವೆಡ್ಡಿಂಗ್ ಶೂಟಿನ ವಿಡಿಯೋ ತುಣುಕನ್ನು ಸೋನಾಲ್ ಅವರು ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದು ಇವರಿಬ್ಬರ ಅಭಿಮಾನಿಗಳು ಇವರ ಹೊಸ ಜೀವನಕ್ಕೆ ಶುಭಾ ಕೋರಿದ್ದಾರೆ. ಇದನ್ನೂ ಓದಿ: ಎಲ್ಲೆಲ್ಲೂ ಸ್ಯಾಂಡಲ್‌ವುಡ್ ಬಾದ್ ಷಾನ ಅಬ್ಬರ.!
ತರುಣ್ ಸುಧೀರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ. ಇಬ್ಬರ ಫೋಟೋಶೂಟ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಇವರ ವಿವಾಹ ದಿನಾಂಕ ಕೂಡ ರಿವೀಲ್ ಆಗಿದೆ.
ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಕನ್ವೆಷನ್ ಹಾಲ್ನಲ್ಲಿ ವಿವಾಹ ನಡೆಯಲಿದೆ. ಆಗಸ್ಟ್ 10ರಂದು ಆರತಕ್ಷತೆ ಹಾಗೂ ಆಗಸ್ಟ್ 11ರಂದು ವಿವಾಹ ಕಾರ್ಯ ನಡೆಯಲಿದೆ.
ತರುಣ್ ಸುಧೀರ್ ಹಾಗೂ ಸೋನಲ್ ‘ರಾಬರ್ಟ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ತರುಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದರೆ ಸೋನಲ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದರು.
ಅಲ್ಲಿಂದ ಇವರಿಬ್ಬರ ಪ್ರೇಮ್ ಕಹಾನಿ ಶುರುವಾಗಿತ್ತು ಎಂದು ಅಭಿಮಾನಿಗಳು ಹೇಳುತ್ತಾರೆ. ಆದರೆ ಇದಕ್ಕೂ ಮೊದಲು ಇವರಿಬ್ಬರ ಮಧ್ಯೆ ಪ್ರೀತಿ ಶುರುವಾಗಿತ್ತು ಎಂದು ಇನ್ನು ಕೆಲವರು ಹೇಳುತ್ತಾರೆ. ಒಟ್ಟಿನಲ್ಲಿ ಅದೇನೆ ಆಗಲಿ ಇವರಿಬ್ಬರೂ ಇದೀಗ ಪರಸ್ಪರ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.