ಶಿಕ್ಷಕನಿಗೆ ಹಿಗ್ಗಾಮುಗ್ಗ ಥಳಿತ

ಶಿಕ್ಷಕನಿಗೆ ಹಿಗ್ಗಾಮುಗ್ಗ ಥಳಿತ

ಮಂಡ್ಯ,ಫೆ. 7 : ಶಾಲಾ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ಶಿಕ್ಷಕನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಶಿಕ್ಷಕ ಭಾಸ್ಕರ್ ನಾಡೀಗೇರ್ ಎಂಬಾತ ಶಾಲೆಯ ಮಕ್ಕಳಿಗೆ ಪ್ರತಿನಿತ್ಯ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಹೆಣ್ಣು ಮಕ್ಕಳ ಅಂಗಾಗ ಸೇರಿದಂತೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬರುತ್ತಿದೆ. ಈ ಶಿಕ್ಷಕನ ಲೈಂಗಿಕ ದೌರ್ಜನ್ಯ ಅತಿರೇಕವಾಗುತ್ತಿದ್ದಂತೆ ಮಕ್ಕಳ ಪೋಷಕರು ಇಂದು ವಿಚಾರಿಸಲು ಏಕಾಏಕಿ ಶಾಲೆ ಬಂದಾಗ ಶೌಚಾಲಯದಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಈ ಕಾಮುಕ ಸಿಕ್ಕಿ ಬಿದ್ದಿದ್ದಾನೆ. ಇದರಿಂದ ಆಕ್ರೋಶಗೊಂಡ ಪೋಷಕರು ಆತನನ್ನು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Related