ಪ್ರಧಾನಿ ಭೇಟಿಯಾದ ಟೀಮ್ ಇಂಡಿಯಾ ಆಟಗಾರರು

ಪ್ರಧಾನಿ ಭೇಟಿಯಾದ ಟೀಮ್ ಇಂಡಿಯಾ ಆಟಗಾರರು

ಈ ಬಾರಿ ಟಿ20 ವಿಶ್ವ ಕಪ್ ನಲ್ಲಿ ಟೀಮ್ ಇಂಡಿಯಾ ಗೆಲುವಿನ ನಗೆ ಬೇರಿದ್ದು, ವಿಶ್ವಕಪ್ ಗೆದ್ದ ಬಳಿಕ ಇದೆ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಗೆದ್ದಿರುವ ಟ್ರೋಫಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟೀಮ್ ಇಂಡಿಯಾ ಆಟಗಾರರು ಹಿಡಿದು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಕಲಾವಿದರ ಕೈಯಲ್ಲರಳಿತು ಟೀಮ್ ಇಂಡಿಯಾ ಕ್ರಿಕೆಟ್ ಆಟಗಾರರ ಭಾವಚಿತ್ರ

ಹೌದು, ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, ಇಂದು ಗುರುವಾರ ಜುಲೈ 03 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿದರು.

ವಿಶ್ವಕಪ್ ಗೆದ್ದು ಆಗಮಿಸಿದ ಟೀಮ್ ಇಂಡಿಯಾವನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಟೀಮ್ ಇಂಡಿಯಾ ಆಟಗಾರರು ಮುಂಬೈಗೆ ತೆರಳಿದ್ದಾರೆ. ಇಂದು ಸಂಜೆ ಭಾರತ ತಂಡ ವಿಜಯಯಾತ್ರೆ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ದೆಹಲಿಯಿಂದ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ.

Related