ಬೆಂಗಳೂರು: ನವೆಂಬರ್ 18 ರಿಂದ 20 ರವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆ 2025ರ ಸಿದ್ಧತೆಗಳ ಭಾಗವಾಗಿ ಇಂದು (ಸೋಮವಾರ ಆಗಸ್ಟ್ 11) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಟೆಕ್ ಶೃಂಗಸಭೆ 2025 ಅನ್ನು “ಭವಿಷ್ಯವನ್ನು ರೂಪಿಸಿ” ಎಂಬ ವಿಷಯದ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ: ಡಿಕೆಶಿ
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶ್ರೀ ಶರತ್ ಬಚ್ಚೇಗೌಡ ಮತ್ತು ಹಿರಿಯ ಇಲಾಖಾ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.
