ತೆಲಂಗಾಣ: ಕಾಂಗ್ರೆಸ್​ನಿಂದ ಪ್ರಣಾಳಿಕೆ ಬಿಡುಗಡೆ

ತೆಲಂಗಾಣ: ಕಾಂಗ್ರೆಸ್​ನಿಂದ ಪ್ರಣಾಳಿಕೆ ಬಿಡುಗಡೆ

ತೆಲಂಗಾಣ: ತೆಲಂಗಾಣ ರಾಜ್ಯದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ತನ್ನ ಅಧಿಕಾರದ ಗದ್ದುಗೆ ಏರಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಚುನಾವಣೆ ಪ್ರಯುಕ್ತ ತೆಲಂಗಾಣದಲ್ಲಿ ಐಐಸಿಸಿ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ ಅವರಿಂದ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಹೌದು, ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಇಂದು (ನ. 17ಶುಕ್ರವಾರ) ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 500 ರೂ.ಗೆ ಎಲ್‌ಪಿಜಿ ಸಿಲಿಂಡರ್, ಉಚಿತ ವಿದ್ಯುತ್, ಚಿನ್ನ ಮತ್ತು ಹೆಣ್ಣುಮಕ್ಕಳ ಮದುವೆಗೆ ನಗದು ನೀಡುವ ಭರವಸೆಗಳನ್ನು ನೀಡಿದೆ. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ತೆಲಂಗಾಣ ಪ್ರತ್ಯೇಕ ರಾಜ್ಯ ಮಾಡುವಲ್ಲಿ ಕಾಂಗ್ರೆಸ್ ಮತ್ತು ಸೋನಿಯಾ ಗಾಂಧಿಯವರ ಪಾತ್ರವನ್ನು ಪ್ರಸ್ತಾಪಿಸಿದರು.

 

Related