ಕಿರುತೆರೆ ನಟಿ ಮೇಲೆ ಅತ್ಯಾಚಾರ..!

ಕಿರುತೆರೆ ನಟಿ ಮೇಲೆ ಅತ್ಯಾಚಾರ..!

ಮದುವೆಯ ನೆಪದಲ್ಲಿ ನನ್ನ ಮೇಲೆ ನಿರ್ದೇಶಕರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಟೆಲಿವಿಷನ್ ನಟಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಸಂಬಂಧ  ಮುಂಬೈನ ವರ್ಸೋವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಯುಷ್ ತಿವಾರಿ ಎಂದು ಗುರುತಿಸಲಾದ ಆರೋಪಿ ವಿರುದ್ಧ ದೂರು ದಾಖಲಾಗಿದೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ಅತ್ಯಾಚಾರದ ಅಡಿಯಲ್ಲಿ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಪ್ರಕರಣ ಸಂಬಂಧ  ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ವರ್ಸೋವಾ ಪೊಲೀಸ್ ಠಾಣೆ ಹಿರಿಯ ಅಧಿಕಾರಿ ರಾಘವೇಂದ್ರ ಠಾಕೂರ್ ಮಾಹಿತಿ ನೀಡಿದ್ದಾರೆ.

Related