ಜೂನ್ 1 ರಿಂದ ದೇವಸ್ಥಾನಗಳು ಓಪನ್

ಜೂನ್ 1 ರಿಂದ ದೇವಸ್ಥಾನಗಳು ಓಪನ್

ಬೆಂಗಳೂರು : ಜಾತ್ರೆ ಸಮಾರಂಭಗಳಿಗೆ ಅವಕಾಶ  ನೀಡಿಲ್ಲ.  ಜೂನ್ 1ರಿಂದ ರಾಜ್ಯದ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ ಎಂದು  ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನಗಳನ್ನು ತೆರೆಯುವುದರ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಸದ್ಯಕ್ಕೆ ದೇವಸ್ಥಾನಗಳಲ್ಲಿ ಭಕ್ತರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದರು.

ನಾಳೆ ಯಿಂದ ರಾಜ್ಯ 52 ದೇವಸ್ತಾನಗಳ ಆನ್ ಲೈನ್ ಸೇವೆಗೆ ಅವಕಾಶ ನೀಡಲಾಗಿದೆ ಎಂದ ಅವರು ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲಿ ಎಂದರು.

 

 

Related