ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಗೊಂದಲ : ಬಿ. ಸಿ ನಾಗೇಶ್..!!

ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಗೊಂದಲ : ಬಿ. ಸಿ ನಾಗೇಶ್..!!

ರಾಜ್ಯದಲ್ಲಿ ದಿನಕ್ಕೊಂದು ವಿವಾದವನ್ನು ಹುಟ್ಟು ಹಾಕುತ್ತಿರುವಂತ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ, ರಾಜ್ಯ ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ ‘ಈ ಹಿಂದೆ ಸಿದ್ದರಾಮಯ್ಯ ಅವಧಿಯಲ್ಲಿ ಪರಿಷ್ಕೃತ ಪಠ್ಯಪುಸ್ತಕದಲ್ಲಿ ಏನು ಬಿಟ್ಟಿದ್ದರು, ಈಗ ನಾವೇನು ಸೇರಿಸಿದ್ದೇವೆ ಎಲ್ಲವನ್ನೂ ಸಾರ್ವಜನಿಕರ ಮುಂದೆ ಇಡುತ್ತೇ ವೆ’. ‘ಜನರು ತಪ್ಪಿದೆ ಎಂದು ಹೇಳಿದ್ದನ್ನು ಬದಲಾಯಿಸುವ ಮನಸ್ಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ. ತಪ್ಪಿದೆ ಅಂದಿದ್ದನ್ನು ನಾವು ಸರಿಪಡಿಸಿದ್ದೇವೆ’. ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯನ್ನು ಆರ್.ಟಿ. ನಗರದ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ನಾವು ಈಗಾಗಲೇ ಎರಡು ತೀರ್ಮಾನ ತೆಗೆದುಕೊಂಡಿದ್ದೇವೆ’. ‘ಜನರು ತಪ್ಪಿದೆ ಎಂದು ಹೇಳಿದ್ದನ್ನು ಬದಲಾಯಿಸುವ ಮನಸ್ಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ. ತಪ್ಪಿದೆ ಅಂದಿದ್ದನ್ನು ನಾವು ಸರಿಪಡಿಸಿದ್ದೇವೆ’ ಎಂದು ಹೇಳಿದ್ದಾರೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ 2 ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಒಂದು ಪಠ್ಯಪರಿಷ್ಕರಣೆ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸೋದು ಆಗಿದೆ. ಮತ್ತೊಂದು ಈ ಹಿಂದಿನ ಪಠ್ಯಪರಿಷ್ಕರಣೆ ಸಮಿತಿಯ ಬಗ್ಗೆಯೂ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದರು.

Related