ಪಠ್ಯ ಪುಸ್ತಕಗಳಲ್ಲಿ 8 ತಿದ್ದುಪಡಿಗಳಿಗೆ ಆದೇಶ..

  • In State
  • June 28, 2022
  • 223 Views
ಪಠ್ಯ ಪುಸ್ತಕಗಳಲ್ಲಿ 8 ತಿದ್ದುಪಡಿಗಳಿಗೆ ಆದೇಶ..

ಬಸವಣ್ಣನವರಿಗೆ ಸಂಬಂಧಿಸಿದ ಅಂಶಗಳನ್ನು ತಿರುಚಲಾಗಿದೆ ಎಂಬ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಲಿಂಗಾಯತ ಧರ್ಮೀಯರಿಂದಲೂ ತೀವ್ರ ಟೀಕೆಗೆ ಒಳಗಾಗಿತ್ತು. ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಎಂಬ ಅಂಶವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ಕೈಬಿಡಲಾಗಿದ್ದ ಸಂಬಂಧವೂ ವಿವಾದ ಭುಗಿಲೆದ್ದಿತ್ತು.

ಬೆಂಗಳೂರು, ಜೂ 28 : ಕರ್ನಾಟಕದ ಶಿಕ್ಷಣ ಇಲಾಖೆ ಶಾಲಾ ಪಠ್ಯಪುಸ್ತಕಗಳಲ್ಲಿ 8 ತಿದ್ದುಪಡಿಗಳನ್ನು ಆದೇಶಿಸಿದೆ. ಸಮಾಜ ಸುಧಾರಕರ ಕೃತಿಗಳನ್ನು ಕೈಬಿಡುವ ಮೂಲಕ ಪಠ್ಯಕ್ರಮವನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಿದ್ದುಪಡಿಗೆ ಮುಂದಾಗಿದೆ. ಸರ್ಕಾರ ನೇಮಿಸಿದ ಸಮಿತಿಯ ಪರಿಷ್ಕರಣೆಗಳನ್ನು ಲೇಖಕರು, ಶಿಕ್ಷಣ ತಜ್ಞರು, ಧಾರ್ಮಿಕ ಮುಖಂಡರು ಮತ್ತು ವಿರೋಧ ಪಕ್ಷಗಳು ತೀವ್ರವಾಗಿ ವಿರೋಧಿಸಿದ್ದವು. ಬಸವಣ್ಣನವರಿಗೆ ಸಂಬಂಧಿಸಿದ ಅಂಶಗಳನ್ನು ತಿರುಚಲಾಗಿದೆ ಎಂಬ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಲಿಂಗಾಯತ ಧರ್ಮೀಯರಿಂದಲೂ ತೀವ್ರ ಟೀಕೆಗೆ ಒಳಗಾಗಿತ್ತು. ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಎಂಬ ಅಂಶವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ಕೈಬಿಡಲಾಗಿದ್ದ ಸಂಬಂಧವೂ ವಿವಾದ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೂನ್‌ನಲ್ಲಿ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದ್ದರು.

Related