ದೇಶದ ಬೆನ್ನೆಲುಬಾದ ರೈತಾಪಿ ವರ್ಗಕ್ಕೆ ಚಿರಋಣಿ

ದೇಶದ ಬೆನ್ನೆಲುಬಾದ ರೈತಾಪಿ ವರ್ಗಕ್ಕೆ ಚಿರಋಣಿ

ಕೆ.ಆರ್ ಪುರ : ಜಾತಿ, ಧರ್ಮ, ಜನಾಂಗ ತ್ಯಜಿಸಿ ನಾವೆಲ್ಲ ಭಾರತೀಯರು ಎಂಬ ಮನೋಭಾವನೆ ಬೆಳೆಸಿಕೊಂಡರೆ ಮಾತ್ರ ದೇಶ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತದೆ ಎಂದು ರಾಷ್ಟ್ರೀಯ ಹಬ್ಬಗಳ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಬೆಂ.ಪೂ.ತಾ. ತಹಶೀಲ್ದಾರ್ ಅಜಿತ್ ರೈ ಹೇಳಿದರು. ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಪ್ರಚಾರ ಸಮಿತಿ ಅಧ್ಯಕ್ಷ ಅಜಿತ್ ರೈ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.

ದೇಶಕ್ಕಾಗಿ ಸ್ವಾತಂತ್ರ‍್ಯ ತಂದುಕೊಟ್ಟು ಸಂವಿಧಾನ ರಚಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮಾರ್ಗತೋರಿದ ಮಹಾತ್ಮರು ಉದ್ದೇಶವನ್ನು ನೆನಸಿ ಕೊಂಡು ದಾರಿ ತಪ್ಪದೇ ಸರಿ ದಾರಿಯಲ್ಲಿ ಜೀವಿಸಬೇಕು ಎಂದರು.

ತಮ್ಮ ತ್ಯಾಗ ಬಲಿದಾನಗಳಿಂದ ದೇಶವನ್ನು ಕಾಪಾಡುವ ಭೂಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಯ ಸೈನಿಕರಿಗು, ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ವಿಜ್ಞಾನಿಗಳು ತಂತ್ರಜ್ಞಾನಗಳು ಮತ್ತು ದೇಶದ ಬೆನ್ನೆಲುಬಾದ ರೈತಾಪಿ ವರ್ಗಕ್ಕೆ ನಾವುಗಳು ಚಿರ ಋಣಿಗಳಾಗುತ್ತ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸೇವೆ ಸಲ್ಲಿಸೋಣ ಎಂದರು.

ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಂಟಿ ಆಯುಕ್ತ ವೆಂಕಟಚಲಪತಿ, ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಬಿ.ಇ.ಓ ಹನುಮಂತರಾಯಪ್ಪ, ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ, ಮುಖಂಡರಾದ ರವಿಕುಮಾರ್, ಶಿವಪ್ಪ ಕೃಷ್ಣ ಇದ್ದರು.

Related