ಇಂದಿನಿಂದ ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಪ್ರಾರಂಭ: ಮೋದಿ

ಇಂದಿನಿಂದ ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಪ್ರಾರಂಭ: ಮೋದಿ

ಇಂದು ಭಾರತ ದೇಶದಲ್ಲಿ ಮೊದಲ ಹಂತದ ಚುನಾವಣೆ ಪ್ರಾರಂಭವಾಗಿದ್ದು ದೇಶದಲ್ಲಿ 21 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮತದಾರಿಗೆ ವಿಶೇಷ ಮನವಿಯನ್ನು ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯ ಮೂಲಕ 21 ರಾಜ್ಯದ ಮತದಾರರಿಗೆ ನರೇಂದ್ರ ಮೋದಿಯವರು, ಇಂದಿನಿಂದ ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಪ್ರಾರಂಭವಾಗಿದ್ದು ದಯಮಾಡಿ ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದು ತಮ್ಮ ಎಕ್ಸ್ ಖಾತೆಯ ಮೂಲಕ ಮನವಿ ಮಾಡಿದ್ದಾರೆ.

ಇನ್ನು ಪ್ರಥಮ ಬಾರಿಗೆ ಮತದಾನ ಮಾಡಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ ಎಂದು ಎಕ್ಸ್​ನಲ್ಲಿ ಬರೆದಿದ್ದಾರೆ.

ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಮತ್ತು ಉತ್ತರ ಪ್ರದೇಶದಲ್ಲಿ ಮತದಾನ ನಡೆಯುತ್ತಿದೆ. ಇದಲ್ಲದೇ ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಪುದುಚೇರಿಯಲ್ಲಿಯೂ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

Related