ಹಲವು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ

ಹಲವು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ

ಬೆಂಗಳೂರು : ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಆರು ಕ್ಷೇತ್ರಗಳಲ್ಲೂ ಬಿಜೆಪಿ ವಿಜಯ ಸಾಧಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪೆರೇಸಂದ್ರ ಗ್ರಾಮದಲ್ಲಿ ಮತ ಚಲಾಯಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್‌ನ ಸಂಕಷ್ಟದಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ಮತ ಚಲಾಯಿಸಬೇಕು ಎಂದು ಮನವಿ ಮಾಡುತ್ತೇನೆ.

ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ವಿಧಾನಪರಿಷತ್ನ ನಾಲ್ಕು ಹಾಗೂ ವಿಧಾನಸಭೆಯ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶಾಲಿಯಾಗಲಿದ್ದಾರೆ ಎಂದು ಹೇಳಿದರು.

Related