ಜಿಲ್ಲಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ

ಜಿಲ್ಲಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿರುವ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಪ್ರತಿ ತಾಲೂಕು ಮತ್ತು ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳೇ ಬಗೆಹರಿಸಬೇಕು. ಜಿಲ್ಲಾ ಅಧಿಕಾರಿಗಳಿಗೆ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಮನೋಭಾವ ಇದ್ದರೆ ಯಾವುದೇ ಸಮಯ ಯಾವುದೇ ಸಂದರ್ಭದಲ್ಲಿ ಕೂಡ ಕೆಲಸ ಮಾಡುತ್ತಾರೆ.

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಯಾವ ಜಿಲ್ಲೆಯಲ್ಲೂ ಕೂಡ ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಜಿಲ್ಲಾಧಿಕಾರಿಗಳು ಇಬ್ಬರು ಸೇರಿ ಪ್ರತಿ ಜಿಲ್ಲೆ ಮತ್ತು ತಾಲೂಕು, ಗ್ರಾಮಗಳ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಪತ್ರಕರ್ತರ ಹಿತರಕ್ಷಣೆ, ಸಮಸ್ಯೆ ನಿವಾರಣೆಗೆ ಪ್ರಥಮ ಆದ್ಯತೆ- ಶಿವಕುಮಾರ್ ಬೆಳ್ಳಿತಟ್ಟೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ, ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ, ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

 

Related