ರಾಜ್ಯದಲ್ಲಿರುವ ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ: ತಿಳಿಸಿದೆ ಸಿಎಂ

ರಾಜ್ಯದಲ್ಲಿರುವ ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ: ತಿಳಿಸಿದೆ ಸಿಎಂ

ಹಾವೇರಿ: ರಾಜ್ಯದಲ್ಲಿರುವಂತಹ ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಮ್ಮ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮಾಹಿತಿಯನ್ನು ನೀಡಿದ್ದು ಈ ಬಗ್ಗೆ ಕೇಂದ್ರ ಸರ್ಕಾರ ಏನು ತೀರ್ಮಾನ ಕೈಗೊಳ್ಳುತ್ತದೆ ಕಾದು ನೋಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904 ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬಿಗ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಚಿವರಾದ ಮಂಕಾಳ‌ ವೈದ್ಯ, ಶಿವಾನಂದ ಪಾಟೀಲ್ ಮುಖ್ಯ ಅತಿಥಿಗಾಗಿದ್ದರು. ನರಸಾಪುರ ಗುರು ಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಮತ್ತು ಚರಮೂರ್ತಿ ಚರಂತೇಶ್ವರ ಮಠದ ಶರಣಬಸವ ದೇವರು ದಿವ್ಯ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಗುರುಮಹಾಂತ ಮಹಾಸ್ವಾಮಿಗಳು, ಜ್ಞಾನಪ್ರಕಾಶ ಮಹಾಸ್ವಾಮಿಗಳು, ಶಾಂತವೀರ ಮಹಾಸ್ವಾಮಿಗಳು, ಅನ್ನದಾನಿ ಬಸವಪ್ರಿಯ ಅಪ್ಪಣ್ಣ ಮಹಾಸ್ವಾಮಿಗಳು, ಬಸವಮಾಚಿದೇವ ಮಹಾಸ್ವಾಮಿಗಳು, ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ನಿಜಗುಣದೇವರು, ಯೋಗಾನಂದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

Related