ಕಾಂಗ್ರೆಸ್ ಪಕ್ಷ ಕರುನಾಡ ಗೃಹಲಕ್ಷ್ಮಿಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಕಾಂಗ್ರೆಸ್ ಪಕ್ಷ ಕರುನಾಡ ಗೃಹಲಕ್ಷ್ಮಿಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ಕಾಂಗ್ರೆಸ್ ಪಕ್ಷ ಬರೀ ಚುನಾವಣೆ ರಾಜಕೀಯ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತಿದ್ರು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ವಿಚಾರಿಸಿ ಅವರಿಗೆ ಉಪಯೋಗವಾಗುವಂತೆ ನಡೆದುಕೊಳ್ಳುತ್ತದೆ. ಕಾಂಗ್ರೆಸ್ ಪಕ್ಷ ಯಾವಾಗ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆಯೋ ಆವಾಗೆಲ್ಲ ದೀನ ದಲಿತರಿಗೆ ಅದರಲ್ಲೂ ಮಹಿಳೆಯರಿಗೆ ಮೊದಲಿನಿಂದಲೂ ಬಹಳಷ್ಟು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದು ತರಬೇಕೆನ್ನುವ ಕನಸು  ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಅವರಿಂದು ಮೈಸೂರಿನಲ್ಲಿ ಗ್ರಹಲಕ್ಷ್ಮಿ ಯೋಜನೆಗೆ ಕಾರ್ಯಕ್ರಮ ಸಿದ್ಧಗೊಂಡಿದೆ ಎಂದು ಪರೀಕ್ಷಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಗೂ ಗೃಹಲಕ್ಷ್ಮಿ ಯೋಜನೆಗೂ ಯಾವುದೇ ಸಂಬಂಧ ಇಲ್ಲ. ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಭಾಷೆ ನೀಡಿದಂತೆ ಇಂದು ಆ ಭಾಷೆಯನ್ನು ಈಡೇರಿಸುತಿದ್ದೇವೆ.

ಇದರಲ್ಲಿ ಯಾವುದೇ ರೀತಿಯ ರಾಜಕಾರಣ ಮಾಡುತ್ತಿಲ್ಲ. ಪಕ್ಷಾತೀತವಾಗಿ ಈ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಹೇಳಿದರು.

ಇಂದು ಗೃಹಲಕ್ಷ್ಮಿ ಯೋಜನೆಯ 12,600 ಸ್ಥಳಗಳಲ್ಲಿ ನಡೆಯುತ್ತಿದೆ ಆಯಾ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸರ್ಕಾರದ ಕಾರ್ಯಕ್ರಮವನ್ನು ಮಾಡುತ್ತಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೃಹಲಕ್ಷ್ಮಿಯರು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಆಶೀರ್ವಾದ ಮಾಡುತ್ತಾರೆ ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ಪಕ್ಷ ಕರುನಾಡ ಗೃಹಲಕ್ಷ್ಮಿಯರ ಮುಖದಲ್ಲಿ ಮಂದಹಾಸ ಮಾಡುವಂತಹ ಕೆಲಸ ಮಾಡುತ್ತಿದೆ ಅದರಿಂದ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು

 

 

 

Related