ಇಬ್ಬರು ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ

ಇಬ್ಬರು ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ

ಬೆಳಗಾವಿ : ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕ್ರಿಮಿನಾಶಕ ಸೇವಿಸಿ ಪ್ರವೀಣ್ ಶೆಟ್ಟರ್ (37), ರಾಜೇಶ್ವರಿ (27), ಅಮೃತಾ (8), ಅದ್ವಿಕ್ (6) ಮೃತಪಟ್ಟಿದ್ದಾರೆ. ಪ್ರವೀಣ್ ಶೆಟ್ಟರ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆಯನ್ನು ಹೊಂದಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಸ್ಥಳೀಯ ಶಾಸಕ ಮಹಾದೇವಪ್ಪ ಯಾದವಾಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವಗಳನ್ನು ತಾಲೂಕು ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದೆ.

ಆತ್ಮಹತ್ಯೆಯ ಸುದ್ದಿ ತಿಳಿದು ಕುಟುಂಬದವರ ಸಂಬಂಧಿಕರು, ಸ್ನೇಹಿತರು ಸ್ಥಳಕ್ಕೆ ಧಾವಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ  ಶವಗಳನ್ನು ಹಸ್ತಾಂತರ ಮಾಡಲಾಗುತ್ತದೆ. ರಾಮದುರ್ಗ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.

ಪ್ರವೀಣ್ ಶೆಟ್ಟರ್ ಮನೆಗೆ ರಾಮದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಮದುರ್ಗ ಠಾಣೆಯಲ್ಲಿ ಸಾಮೂಹಿಕ ಆತ್ಮಹತ್ಯೆ ಬಗ್ಗೆ ಪ್ರಕರಣ ದಾಖಲಾಗಿದೆ.

Related