ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು ಒಂದು ಲಕ್ಷ. ರೂ ಪರಿಹಾರ

  • In State
  • August 17, 2021
  • 391 Views
ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು ಒಂದು ಲಕ್ಷ. ರೂ ಪರಿಹಾರ

ತುಮಕೂರು: ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ  ಮಾಡಲು ಹೋಗಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿದ, ಸೋಮವಾರ ಬೆಳಗ್ಗೆ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತ ಪಟ್ಟ ವಿದ್ಯಾರ್ಥಿ ಚಂದನ್ ತಾಯಿ ನೇತ್ರಾವತಿ ಅವರಿಗೆ ಒಂದು ಲಕ್ಷ ರೂ ಗಳ ಚೆಕ್ ವಿತರಿಸಿ, ಮತ್ತೊಬ್ಬ ವಿದ್ಯಾರ್ಥಿ ಶಶಾಂಕ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ, ಅತನ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿ ಕೊಡಲು ತುಮಕೂರಿನ ಉಪ ನಿರ್ದೇಶಕ ನಂಜಯ್ಯ ಅವರಿಗೆ ಸೂಚನೆ ನೀಡಿದರು. ಘಟನೆಯ ಬಗ್ಗೆ ತನಿಖೆ ನಡೆಸಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತುಮಕೂರಿನ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಹುಲ್ ಕುಮಾರ್ , ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ, ಉಪ ನಿರ್ದೇಶಕ ನಂಜಯ್ಯ, ಉಪ ವಿಭಾಗಾಧಿಕಾರಿ ಅಜೇಯï, ತಹಶೀಲ್ದಾರ್ ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯಕ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

Related