ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ಸಿದ್ದಪಡಿಸಿದ ಸರ್ಕಾರ

ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ಸಿದ್ದಪಡಿಸಿದ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಈಗಾಗಲೇ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಆ ಗ್ಯಾರೆಂಟಿಗಳನ್ನು ಜನರಿಗೆ ತಲುಪುವಂತೆ ಹಲವಾರು ತಯಾರಿಗಳನ್ನು ಮಾಡುತ್ತಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ 5 ಗ್ಯಾರಂಟಿಗಳ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಗೃಹಲಕ್ಷ್ಮೀ ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ಗಂಭೀರ ಸಮಾಲೋಚನೆ ನಡೆಯಲಿದೆ. ಇನ್ನು ಮುಖ್ಯವಾಗಿ ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್ ಸಿಗುವ ಸಾಧ್ಯತೆ ಇದೆ. ಅರ್ಜಿ ಯಾವಾಗ ಹಾಕುವುದು ಎಂದು ಚಿಂತೆ ಮಾಡುತ್ತಿದ್ದ ಮಹಿಳೆಯರಿಗೆ ಇಂದಿನ ಕ್ಯಾಬಿನೆಟ್‌ ಸಭೆ ಬಳಿಕ ಉತ್ತರ ಸಿಗಲಿದೆ. ವಿಶೇಷ ಅಂದ್ರೆ, ಗೃಹಲಕ್ಷ್ಮೀ ಗ್ಯಾರಂಟಿಗಾಗಿಯೇ ಪ್ರತ್ಯೇಕ ಆ್ಯಪ್ ರೆಡಿಯಾಗಿದೆ. ಈ ಹಿನ್ನೆಲೆಲ್ಲಿ ಇಂದು ಮನೆ ಯಜಮಾನಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಿವೆ.

ಸರ್ವರ್ ಡೌನ್​ ಸಮಸ್ಯೆಗೆ ಮುಕ್ತಿಗೆ ತಯಾರಿ

ಗೃಹಲಕ್ಷ್ಮೀ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯಾಗಿದೆ. ಅಂದುಕೊಂಡಂತೆ ಆಗಿದ್ರೆ, ಈ ಯೋಜನೆಗೆ ಜುಲೈ 15ರಂದೇ ಅರ್ಜಿ ಆಹ್ವಾನಕ್ಕೆ ಅವಕಾಶ ನೀಡಬೇಕಿತ್ತು. ಆದ್ರೆ, ಗೃಹಜ್ಯೋತಿ ಗೊಂದಲ, ಗದ್ದಲ, ಸರ್ವರ್ ಡೌನ್‌ನಿಂದ ಸಮಸ್ಯೆಯಿಂದ ಮುಕ್ತಿ ನೀಡಲು ಸರ್ಕಾರ ಪ್ಲ್ಯಾನ್ ಮಾಡಿದೆ. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಸಿದ್ದಪಡಿಸಿದ್ದರಿಂದ 15 ದಿನ ವಿಳಂಬವಾಗಿ ಅರ್ಜಿ ಆಹ್ವಾನ ನೀಡಿಲಾಗುತ್ತಿದೆ. ಅದೂ ಕೂಡಾ ಆ್ಯಪ್ ಮೂಲಕ.

‘ಗೃಹಲಕ್ಷ್ಮೀ’ಗಾಗಿ ಪ್ರತ್ಯೇಕ ಆ್ಯಪ್​​​ ಸಿದ್ಧಪಡಿಸಿದ ಸರ್ಕಾರ

ಗೃಹಲಕ್ಷ್ಮೀ ಯೋಜನೆ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಗೃಹಲಕ್ಷ್ಮೀ ಹೆಸರಲ್ಲೇ ಪ್ರತ್ಯೇಕವಾದ ಆ್ಯಪ್ ಸಿದ್ಧಪಡಿಸಲಾಗಿದ್ದು, ಸರ್ವರ್ ಸಮಸ್ಯೆಗೆ ಕಡಿವಾಣ ಹಾಕಲು ಆ್ಯಪ್ ತಯಾರಿ ಮಾಡಲಾಗಿದೆ. ಇಂದಿನ ಕ್ಯಾಬಿನೆಟ್ ಸಭೆ ಬಳಿಕ ಆ್ಯಪ್ ರಿಲೀಸ್ ಮಾಡುವ ಸಾಧ್ಯತೆಯಿದೆ. ಇನ್ನೂ ಸೇವಾಸಿಂಧು ವೆಬ್​​​ಸೈಟ್​​ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಗೂಗಲ್ ಪ್ಲೇ ಸ್ಟೋರ್, ಆ್ಯಪಲ್ ಸ್ಟೋರ್​​​ನಲ್ಲಿ ಆ್ಯಪ್ ಲಭ್ಯವಾಗಲಿದೆ.

 

Related