ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಸರಕಾರ ಚಿಂತನೆ

ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಸರಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆ ಬಾರದಿದ್ದ ಕಾರಣ ವಿದ್ಯುತ್ ಉತ್ಪಾದನೆಗೆ ಬಹಳ ತೊಂದರೆಯಾಗುತ್ತಿದೆ ಎಂದು ಇಂದಿನ ಸಚಿವ ಜೆಕೆ ಜಾರ್ಜ್ ಅವರು ತಿಳಿಸಿದ್ದಾರೆ.

ಇನ್ನು ವಿದ್ಯುತ್ ಕೊರತೆಯನ್ನು ನೀಗಿಸಲು ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ನಾವು ಬೇರೆ ರಾಜ್ಯದವರೊಂದಿಗೆ ಈಗಾಗಲೇ ಮಾತುಕತೆಗಳನ್ನು ನಡೆಸಿದ್ದೇವೆ ಮತ್ತು ಇನ್ನು ಯಾವೆಲ್ಲಾ ರೀತಿಯ ವಿದ್ಯುತ್ ಉತ್ಪಾದನೆಗೆ ನಾವು ಕ್ರಮ ಕೈಗೊಳ್ಳಬೇಕೆಂದು ಚಿಂತನೆ ಮಾಡುತ್ತಿದ್ದೇವೆ ಎಂದು ಹೇಳಿದರು

ಈ ಸಂಬಂಧ ನವದೆಹಲಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮಳೆ ಅಭಾವ ಇರುವುದು ಎಲ್ಲರಿಗೂ ಗೊತ್ತಿದೆ. ಈ ಸೆಪ್ಟೆಂಬರ್ ತಿಂಗಳಲ್ಲಿ ವಿದ್ಯುತ್ ಕೊರತೆ ಜಾಸ್ತಿ ಇದೆ. 16000 ಮೆಗಾ ವ್ಯಾಟ್ ವಿದ್ಯುತ್‌ಗೆ ಬೇಡಿಕೆ ಇದೆ. 1500 ಮೆಗಾ ವ್ಯಾಟ್ ಕೊರತೆ ಇದೆ. ಕೊರತೆಯನ್ನು ನೀಗಿಸಲು ಇಂಧನ ಖರೀದಿಗೆ ಮುಂದಾಗಿದ್ದೇವೆ

ವಿದ್ಯುತ್‌ ಕೊರತೆ ನೀಗಿಸಲು ಬೇರೆ ಬೇರೆ ರಾಜ್ಯಗಳ ಬಗ್ಗೆ ಮಾತನಾಡುತ್ತಾ ಇದ್ದೇವೆ. ನಮಗೆ ತೊಂದರೆ ಆಗಿದೆ. ಇದಕ್ಕೆ ಬಿಜೆಪಿ ಕಾರಣ. ಕಳೆದ 4 ವರ್ಷಗಳ ಬಿಜೆಪಿ ಆಡಳಿತದಲ್ಲಿ ವಿದ್ಯುತ್ ಅನ್ನು ಹೆಚ್ಚಿಸುವ ಯಾವ ಕೆಲಸವನ್ನೂ ಈ ಸರ್ಕಾರ ಮಾಡಿಲ್ಲ. ನಮ್ಮ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನದ ಉತ್ಪಾದನೆಯನ್ನು ಹೆಚ್ಚು ಮಾಡಿದ್ದೆವು. ಆದರೆ, ಬಿಜೆಪಿಯವರು 4 ವರ್ಷ ನಿದ್ದೆ ಮಾಡಿರುವ ಸಲುವಾಗಿ ಇಂದು ನಮಗೆ ವಿದ್ಯುತ್ ಕೊರತೆ ಆಗಿದೆ ಎಂದು ಹೇಳಿದರು.

ವಿದ್ಯುತ್‌ ಕೊರತೆ ನೀಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬೇರೆ ರಾಜ್ಯದಿಂದ ವಿದ್ಯುತ್‌ ಖರೀದಿ ಮಾಡಿ ನೀಡಲಾಗುವುದು ಎಂದು ಕೆ.ಜೆ. ಜಾರ್ಜ್‌ ಹೇಳಿದರು.

Related